Kannada NewsKarnataka NewsLatestPolitics

*BSY ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಸಚಿವ ಪ್ರಹ್ಲಾದ ಜೋಶಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

Home add -Advt

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ನೂರಕ್ಕೆ ನೂರರಷ್ಟು ಸರ್ಕಾರದ ಷಡ್ಯಂತ್ರ ಇದು ಎಂದು ಆರೋಪಿಸಿದರು.

ಯಡಿಯೂರಪ್ಪ ಅವರ ವಯಸ್ಸೇನು? ಅವರ ಹಿರಿತನವೇನು? ಅವರ ಸ್ಟೇಟಸ್ ಏನು? ಅವರ ವಿರುದ್ಧ ಈ ರೀತಿ ಷಡ್ಯಂತ್ರ ಮಾಡುವುದು ಎಂದರೆ ಎಂಥಾ ಅನ್ಯಾಯವಿದು ಎಂದು ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಒಬ್ಬ ಪ್ರಭಾವಿ, ಹಿರಿಯ ರಾಜಕಾರಣಿ ಮೇಲೆ ಈ ರೀತಿ ಸುಳ್ಳು ದೂರು ದಾಖಲಿಸುವುದು ನಿಜಕ್ಕೂ ಅಕ್ಷಮ್ಯ ಎಂದ ಸಚಿವ ಜೋಶಿ, ಕಾನೂನು ರೀತಿ ತನಿಖೆ ಆಗುತ್ತದೆ. ಅವರು ಇದರಿಂದ ಹೊರಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

Back to top button