Latest

ಶಾಲೆ-ಕಾಲೇಜುಗಳಲ್ಲಿ ಇನ್ಮುಂದೆ ಧ್ಯಾನ ಕಡ್ಡಾಯ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಡ್ಡಾಯ ಮಾಡಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಧ್ಯಾನ ಮಾಡಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಾ ಇಲಾಖೆ ಅಧಿಕಾರಿಗಳಿಗೆ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಧ್ಯಾನ ಸಹಕಾರಿಯಾಗಿದೆ. ಉತ್ತಮ ಗುಣಗಳನ್ನು ರೂಢಿಸಿಕೊಳ್ಳಲು ಧ್ಯಾನ ಅವಶ್ಯಕ. ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಶಾಲೆಗಳಲ್ಲಿ ಧ್ಯಾನಕ್ಕೆ ಅವಕಾಶ ಕಲ್ಪಿಸುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು. ಮನವಿಗೆ ಸ್ಪಂದಿಸಿದ ಸಚಿವ ಬಿ.ಸಿ.ನಾಗೇಶ್ ಧ್ಯಾನ ಕಡ್ಡಾಯಗೊಳಿಸಿ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

Home add -Advt

BMTC ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಟ್ವಿಸ್ಟ್ ಕೊಟ್ಟ ಪೊಲೀಸರು

https://pragati.taskdun.com/latest/bmtc-busaccidentman-death-casepolice-clarification/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button