ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆ ಹಾಗೂ ಕೇರಳ ರಾಜ್ಯದಲ್ಲಿ ಜ್ವರ, ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.
ಕೇರಳದಲ್ಲಿ ಪ್ರತಿ ದಿನ 10 ಸಾವಿರ ಜ್ವರದ ಪ್ರಕರಣಗಳು ಪತ್ತೆಯಾಗುತ್ತಿವೆ. ಚಿಕೂನ್ ಗುನ್ಯಾ, ಡೆಂಘೀ, ಹಕ್ಕಿ ಜ್ವರ, ಹೆಚ್1 ಎನ್1 ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಆರೋಗ್ಯ ಇಲಾಖೆ ಶಾಲಾ-ಕಾಲೆಜುಗಳಿಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಸುತ್ತೋಲೆ ಹೊರಡಿಸಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಕಾಸರಗೋಡು ಗಡಿ ಭಾಗಗಳ ಶಾಲೆ-ಕಾಲೇಜುಗಳಲ್ಲಿ ಕಟ್ಟೆಚ್ಚರವಸುವಂತೆ ಸೂಚನೆ ನೀಡಿದೆ.
ಕೇರಳ ರಾಜ್ಯದಲ್ಲಿ ಜ್ವರದ ಪ್ರಕರಣ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಆರೋಗ್ಯ ಇಲಾಖೆ ಸಚಿವರ ಸಭೆ ಕರೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ