Latest

ಶಾಲೆ ಬಂದ್ ಮಾಡುವುದಕ್ಕೆ ಹೊಸ ಸೂತ್ರ: ಶಿಕ್ಷಣ ಸಚಿವರ ಗೈಡ್ಲೈನ್ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆಗಳು ಮುಂದುವರೆಯಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳು ಮುಂದುವರೆಯಲಿವೆ. ಮಕ್ಕಳಿಗೆ ಸೋಂಕು ಹೆಚ್ಚಾದರೆ ಮಾತ್ರ ಶಾಲೆ ಬಂದ್ ಮಾಡಲಾಗುತ್ತದೆ.

ಶಾಲೆಗಳಲ್ಲಿ ಪಾಸಿಟಿವಿಟಿ ರೇಟ್ ಸಂಖ್ಯೆ ಹೆಚ್ಚಾದರೆ ಅಂದರೆ 5 ಮಕ್ಕಳಿಗೆ ಸೋಂಕು ಪತ್ತೆಯಾದರೆ 3 ದಿನ ಶಾಲೆ ರಜೆ ನೀಡಲಾಗುವುದು. 25-30 ಮಕ್ಕಳಿಗೆ ಶಾಲೆಯಲ್ಲಿ ಸೋಂಕು ಕಂಡುಬಂದರೆ ಅಂತಹ ಶಾಲೆಗಳಿಗೆ 7 ದಿನಗಳವರೆಗೆ ರಜೆ ನೀಡಬಹುದು. ಶಾಲೆ ಬಂದ್ ಬಗ್ಗೆ ಸ್ಥಳೀಯ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಮಾತ್ರ ಜನವರಿ 29ರವರೆಗೆ ಶಾಲೆಗಳು ಬಂದ್ ಆಗಲಿದ್ದು, ಜ.29ರ ಸಭೆ ಬಳಿಕ ಶಾಲೆ ಆರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಮುಂದಿನ ಶುಕ್ರವಾರ ಬೆಂಗಳೂರಿನ ಶಾಲೆಗಳ ಬಗ್ಗೆ ನಿರ್ಧರಿಸಲಾಗುವುದು. ೫-೧೬ ವರ್ಷದ ಮಕ್ಕಳಿಗೆ ಪಾಸಿಟಿವಿಟಿ ರೇಟ್ ಕಡಿಮೆ ಇರುವುದರಿಂದ ಶಾಲೆಗಳನ್ನು ಮುಂದುವರೆಸಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ವೀಕ್ ಎಂಡ್ ಕರ್ಫ್ಯೂ ರದ್ದು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button