Latest

ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಜಾರಿಗೆ ಸಿದ್ಧತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಕಡ್ಡಾಯ ಧ್ಯಾನದ ಕ್ಲಾಸ್ ಜಾರಿಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದರೂ ಶಿಕ್ಷಣ ಇಲಾಖೆ ಧ್ಯಾನ ಜಾರಿಗೆ ಸಿದ್ಧತೆ ನಡೆಸಿದೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಧ್ಯಾನ್ ಅಕಲಿಸಲು ಶಿಕ್ಷಣ ಇಲಾಖೆ ಸಜ್ಜಾಗಿದ್ದು, ಮುಂದಿನ ತಿಂಗಳಿಂದ ಶಾಲೆಗಳಲ್ಲಿ ಧ್ಯಾನ ಜಾರಿ ಮಾಡಲು ಸಿದ್ಧತೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಪತಂಜಲಿ ಯೋಗ ಎಕ್ಸ್ ಪರ್ಟ್ ಗಳ ಸಲಹೆ ಪಡೆಯಲು ಚಿಂತನೆ ನಡೆಸಲಾಗಿದೆ.

ಅಲ್ಲದೇ ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ ಸಲಹೆ ಪಡೆಯಲೂ ತೀರ್ಮಾನಿಸಲಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಯಾವ ರೀತಿ ಧ್ಯಾನ ಹೇಳಿಕೊಡಬೇಕು. ಎಷ್ಟು ಹೊತ್ತು ಧ್ಯಾನ ಮಾಡಿಸಬೇಕು ಎಂಬುದರ ಬಗ್ಗೆ ಸಲಹೆ ಪಡೆಯಲಾಗುತ್ತಿದೆ. ಒಟ್ಟಾರೆ ವಿರೋಧದ ನಡುವೆಯೂ ಧ್ಯಾನ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಶಿಕ್ಷಕರ ಹುದ್ದೆ ಆಯ್ಕೆಗೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ

https://pragati.taskdun.com/15000-school-teachersselectionlist/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button