ಪ್ರಗತಿವಾಹಿನಿ ಸುದ್ದಿ: ಶಾಲೆಯ ಕಬ್ಬಿಣದ ಗೇಟ್ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ಹಯಾತ್ ನಗರದಲ್ಲಿ ನಡೆದಿದೆ.
ಇಲ್ಲಿನ ಎಂಪಿಪಿ ಶಾಲೆಯಲ್ಲಿ ಈ ದುರಂತ ಸಂಭವಿಸಿದೆ. ಬಾಲಕ ಸಂಜೆ ಶಾಲೆಯ ಗೇಟ್ ಬಳಿ ಆಟವಾಡುತ್ತಿದ್ದ. ಈ ವೇಳೆ ಏಕಾಏಕಿ ಗೇಟ್ ನ ಜಾಯಿಂಟ್ ಮುರಿದು ಗೇಟ್ ಬಾಲಕನ ಮೈಮೇಲೆ ಬಿದ್ದಿದೆ. ಬಾಲಕನ ತಲೆಯ ಭಾಗದಲ್ಲಿ ಗಂಭೀರವಾಗಿ ಗಾಯವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
1ನೇ ತರಗತಿ ಅಜಯ್ ಮೃತ ಬಾಲಕ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ