ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಜುಲೈ 29 ಹಾಗೂ 30 ರಂದು ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಿ ಆದೇಶಿಸಲಾಗಿದೆ.
ಧಾರಕಾರವಾಗಿ ಮಳೆಯು ಸುರಿಯುತ್ತಿರುವುರಿಂದ ಘಟಪ್ರಭಾ ನದಿಗೆ ಪ್ರವಾಹ ಬಂದಿರುತ್ತದೆ. ಮಾರ್ಕಂಡೇಯ, ಹಾಗೂ ಹಿರಣ್ಯಕೇಶಿ ನದಿ ನೀರು ಹಾಗೂ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ನದಿಯ ದಂಡೆಗಳ ಮೇಲಿನ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅಡಚಣೆ ಉಂಟಾಗಿರುತ್ತದೆ. ವಲಯದ ವಿವಿಧ ಗ್ರಾಮಗಳಲ್ಲಿ ಹಳ್ಳಗಳು ತುಂಬಿ ಹರಿಯುತ್ತಿದ್ದು, ಕೆಲವೊಂದು ಶಾಲಾ ಕಟ್ಟಡಗಳು ಸೋರುತ್ತಿರುವ ಕಾರಣ ಶಾಲೆಗಳಿಗೆ ರಜೆ ನೀಡಲಾಗಿದೆ.
ಮುಂದುವರೆದು ಕಾಗವಾಡ, ನಿಪ್ಪಾಣಿ, ಹುಕ್ಕೇರಿ ಮತ್ತು ಚಿಕ್ಕೋಡಿ ತಾಲೂಕುಗಳಲ್ಲಿ ನೆರೆ ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರಗಳನ್ನು ತೆರೆಯಲಾದ ಶಾಲೆಗಳಿಗೆ ಮತ್ತು ರಸ್ತೆ ಸಂಪರ್ಕ ಬಂದ ಆಗಿರುವಂತಹ ಶಾಲೆಗಳಿಗೆ ಜುಲೈ 29 ಹಾಗೂ 30 ರಂದು ರಜೆ ಘೋಷಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಪ್ಪಾಣಿ, ಹುಕ್ಕೇರಿ, ಕಾಗವಾಡ ಹಾಗೂ ಚಿಕ್ಕೋಡಿ ತಾಲ್ಲೂಕುಗಳ ಆಯ್ದ ಗ್ರಾಮಗಳ ಶಾಲೆಗಳಿಗೆ ಮಾತ್ರ ರಜೆ
ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು, ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ (ಜುಲೈ 29) ಹಾಗೂ ಮಂಗಳವಾರ (ಜುಲೈ 30) ರಜೆ ಘೋಷಿಸಲಾಗಿರುತ್ತದೆ.
ಇನ್ನುಳಿದಂತೆ ನಿಪ್ಪಾಣಿಯ ಸಿದ್ನಾಳ, ಹುನ್ನರಗಿ, ಕುನ್ನೂರ, ಮಮದಾಪುರ ಕೆ.ಎಲ್., ಬಾರವಾಡ, ಕಾರದಗಾ ಗ್ರಾಮಗಳು;
ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ, ಹೊಸೂರ ಮತ್ತು ಬಡಕುಂದ್ರಿ ಗ್ರಾಮಗಳು
ಕಾಗವಾಡ ತಾಲ್ಲೂಕಿನ ಜೂಗೂಳ, ಶಾಪುರ, ಮಂಗಾವತಿ, ಕೃಷ್ಣಾ ಕಿತ್ತೂರ, ಕಾತ್ರಾಳ ಮತ್ತು ಬನಜವಾಡ ಗ್ರಾಮಗಳು
ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಜನವಾಡ, ಕಲ್ಲೋಳ ಹಾಗೂ ಅಂಕಲಿ ಗ್ರಾಮಗಳ ಶಾಲೆಗಳಿಗೆ ಮಾತ್ರ ಜುಲೈ 29 ಮತ್ತು ಜುಲೈ 30 ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ