ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಪೋಷಕರು ಮಕ್ಕಳು ಭಯಪಡುವ ಅಗತ್ಯವಿಲ್ಲ, ಧರ್ಯವಾಗಿ ಶಾಲೆಗಳಿಗೆ ಬರುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಧೈರ್ಯ ತುಂಬಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಮಕ್ಕಳ ವಿದ್ಯಾಭಾಸಕ್ಕಾಗಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಮಕ್ಕಳು ಧೈರ್ಯವಾಗಿ ಬರಲಿ. ಮಕ್ಕಳ ಕಾಳಜಿ ಅಗತ್ಯ ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಪೋಷಕರು ಹಾಗೂ ಶಿಕ್ಷಕರು ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು. ಮಕ್ಕಳ ಆರೋಗ್ಯದ ಮೇಲೆ ಸರ್ಕಾರ ನಿಗಾವಹಿಸಲಿದೆ ಎಂದು ಹೇಳಿದರು.
ಶಾಲಾ ಆರಂಭದ ಬಗ್ಗೆ ಈಗಗಾಲೇ ಮಾರ್ಗಸೂಚಿ ಹೊರಡಿಸಲಾಗಿದೆ. ಸಾಮಾಜಿಕ ಅಂತರ ಮಾಸ್ಕ್ ಕಡ್ಡಾಯವಾಗಿದ್ದು, ಊಟ, ನೀರು ಮನೆಯಿಂದಲೇ ತೆಗೆದುಕೊಂಡು ಬಂದಿರಬೇಕು. ಶಾಲೆ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ಯಾನಿಂಗ್ ಇರಲಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಪ್ರವಾಸ: ಕಾರ್ಯಕ್ರಮದಲ್ಲಿ ಸ್ವಲ್ಪ ಬದಲಾವಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ