Belagavi NewsBelgaum NewsEducationKarnataka News

*ಮೇ 29 ರಂದು ಶಾಲಾ ಪ್ರಾರಂಭೋತ್ಸವ*

ಪ್ರಗತಿವಾಹಿನಿ ಸುದ್ದಿ: ಎರಡು ತಿಂಗಳ ಬೇಸಿಗೆ ರಜೆ ಮುಗಿಸಿದ ಮಕ್ಕಳು, ಮತ್ತೆ ಶಾಲೆಗೆ ಹೋಗಲು ದಿನಾಂಕ ನಿಗದಿಯಾಗಿದೆ.‌ 2025-26ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷ ಹಾಗೂ ತರಗತಿ ಚಟುವಟಿಕೆಗಳು ಮೇ 29ರಿಂದ ಆರಂಭವಾಗಲಿವೆ.

ಮೇ 29 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವದ ಮೂಲಕ ಮಕ್ಕಳನ್ನು ಸ್ವಾಗತಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಶಾಲೆ ಆರಂಭದ ದಿನದಿಂದಲೇ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಿ ಜೂನ್ 30ರೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಶಿಕ್ಷಕರೂ ಕಡ್ಡಾಯವಾಗಿ ಪಾಲ್ಗೊಂಡು ನಿರ್ದಿಷ್ಟ ವಯೋಮಿತಿ ಇರುವ ಎಲ್ಲ ಮಕ್ಕಳೂ ಶಾಲೆಗೆ ಸೇರುವಂತೆ ನೋಡಿಕೊಳ್ಳಬೇಕು. ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಪಠ್ಯಪುಸ್ತಕ, ಸಮವಸ್ತ್ರಗಳ ವಿತರಣೆ ಮುಂತಾದ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಶಿಕ್ಷಣ ಅಧಿಕಾರಿಗಳು ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಲು ಮಿಂಚಿನ ಸಂಚಾರ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button