Kannada NewsKarnataka NewsLatest
*ಬಾಲಕನ ಮೇಲೆ ರ್ಯಾಗಿಂಗ್: ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಮೂವರು ವಿದ್ಯಾರ್ಥಿಗಳ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಖಾಸಗಿ ಶಾಲೆಯಲ್ಲಿ ಬಾಲಕನ ಮೇಲೆ ರ್ಯಾಗಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಾಲಕನ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಅಹಗೂ ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಶಾಲೆಯಲ್ಲಿ ವಿದ್ಯಾರ್ಥಿಗಳು ಬಾಲಕನಿಗೆ ರ್ಯಾಗಿಂಗ್ ಮಾಡುತ್ತಿದ್ದರು. ಬಾಲಕನಿಂದ ಹಣ ವಸೂಲಿ ಮಾಡುವುದು, ಮೊಬೈಲ್ ತರುವಂತೆ ಹೇಳುವುದು, ಹಣ ಕೊಡದಿದ್ದಾಗ ಹಲ್ಲೆ ನಡೆಸುವುದು ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ಮೂವರು ವಿದ್ಯಾರ್ಥಿಗಳು ಬಾಲಕನ ಮರ್ಮಾಂಗಕ್ಕೆ ಒದ್ದು ಹಲ್ಲೆ ನಡೆಸಿದ್ದರು. ಗಂಭೀರವಾಗಿ ಹಲ್ಲೆಗೊಳಗಾಗಿರುವ ಬಾಲಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಶಾಲೆ ಶಿಕ್ಷಕರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.




