Latest

1-5ನೇ ತರಗತಿ ಶಾಲೆ ಆರಂಭ; ಇಲ್ಲಿದೆ ಸುತ್ತೋಲೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 1-5 ನೇ ತರಗತಿ ವರೆಗಿನ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅಕ್ಟೋಬರ್ 25ರಿಂದ 30ರವರೆಗೆ ರಾಜ್ಯಾದ್ಯಂತ 1-5 ತರಗತಿಯ ಶಾಲೆಗಳನ್ನು ಅರ್ಧದಿನ ಮಾತ್ರ ಆರಂಭಿಸಲು ಸೂಚಿಸಲಾಗಿದೆ. ನವೆಂಬರ್ 2ರಿಂದ ಪೂರ್ಣ ಪ್ರಮಾಣದಲ್ಲಿ ದೈನಂದಿನ ಪೂರ್ಣ ಅವಧಿಗೆ ತರಗತಿಗಳನ್ನು ಆರಂಭಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

* 1-5ನೇ ತರಗತಿಗಳ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆದರೆ ಭೌತಿಕವಾಗಿ ಹಾಜರಾಗುವ ಮಕ್ಕಳಿಗೆ ಪೋಷಕರ ಅನುಮತಿ ಕಡ್ಡಾಯ.
* ಶಾಲೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಸ್ಕ್ ಕಡ್ಡಾಯ
* ಶಿಕ್ಷಕರಿಗೆ 2 ಡೋಸ್ ಲಸಿಕೆ ಕಡ್ಡಾಯವಾಗಿ
* 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ ಶೀಲ್ಡ್ ಧರಿಸುವುದು ಕಡ್ಡಾಯ
* ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗುವುದು
* ಅನುದಾನ ರಹಿಅ ಶಾಲೆಗಳಲ್ಲಿ ಮಕ್ಕಳು ಊಟ ಹಾಗೂ ಕುಡಿಯುವ ನೀರು ಮನೆಯಿಂದಲೇ ತರುವಂತೆ ಸೂಚಿಸಲಾಗಿದೆ
* ಎಲ್ಲಾ ಶಾಲೆಗಳಲ್ಲೂ ಅಗತ್ಯ ಕುಡಿಯುವ ಬಿಸಿ ನೀರಿನ ವ್ಯವಸ್ಥೆ

1 to 5 Class open circular

ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ರಸ್ತೆಯ ತುರ್ತು ರಿಪೇರಿಗೆ ಸಚಿವ ಸಿ.ಸಿ.ಪಾಟೀಲ್ ತಾಕೀತು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button