ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಾಥಮಿಕ ಶಾಲೆ ಪುನರಾರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಮ್ಮತಿ ನೀಡಿದ್ದು, ಅಕ್ಟೋಬರ್ 25ರಿಂದ 1-ರಿಂದ 5ನೇ ತರಗತಿವರೆಗಿನ ಶಾಲೆ ಆರಂಭವಾಗಲಿದೆ.
ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಹಿನ್ನೆಲೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ 1-5ನೇ ತರಗತಿ ಶಾಲೆ ಆರಂಭಿಸಲು ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಅ.25ರಿಂದ ರಾಜ್ಯಾದ್ಯಂತ ಶಾಲೆಗಳು ಪುನರಾರಂಭವಾಗಲಿದ್ದು, ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ ಪ್ರಕಟಿಸಿದೆ.
ಈ ಕುರಿತು ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ದಸರಾ ಬಳಿಕ ಶಾಲೆ ಆರಂಭಿಸಲಾಗುವುದು ಎಂದು ಹೇಲಿದ್ದೆವು. ಅದರಂತೆ ತಾಂತ್ರಿಕ ಸಲಹಾ ಸಮಿತಿ ಈಗ ಒಪ್ಪಿಗೆ ನೀಡಿದೆ. ಅಕ್ಟೋಬರ್ 21 ಅಥವಾ 25ರಿಂದ 1-5ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲಗುವುದು ಎಂದರು.
ಕೋವಿಡ್ ಮಾರ್ಗಸೂಚಿ ಅನ್ವಯಿಸಿ ಶಾಲೆ ಆರಂಭಿಸಲು ಅನುಮತಿ ನೀಡಲಾಗಿದೆ. ಎಲ್ ಕೆಜಿ, ಯುಕೆಜಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಪಠ್ಯ ಕಡಿತದ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆ ನಡೆದಿಲ್ಲ. ಖಾಸಗಿ ಶಾಲೆಗಳ ಫೀಸ್ ವಿಚಾರದ ಬಗ್ಗೆ ಕೋರ್ಟ್ ನಿಂದ ಆದೇಶ ಬಂದ ಬಳಿಕ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಗೈಡ್ ಲೈನ್:
* ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ
* ತರಗತಿಯಲ್ಲಿ ಶೇ.50ರಷ್ಟು ಮಾತ್ರ ವಿದ್ಯಾರ್ಥಿಗಳಿರಬೇಕು
* ಒಂದು ಮಿಟರ್ ದೈಹಿಕ ಅಂತರ ಪಾಲನೆ
* ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
* ತರಗತಿಯಲ್ಲಿ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ
*ಶಾಲೆಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ
1-5ನೇ ತರಗತಿ ಶಾಲೆ ಆರಂಭ; ಸಿಎಂ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ