
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಧ್ಯಕ್ಕೆ ಶಾಲೆ ಆರಂಭ ಮಾಡದಿರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಾಲೆ ಆರಂಭದ ಕುರಿತಾಗಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆದಿದ್ದು, ಸಭೆ ಬಳಿಕ ಮಾತನಾಡಿದ ಸಿಎಂ, ಸಧ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ. ಹಾಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭಿಸುವುದಿಲ್ಲ. ಬಳಿಕ ಮತ್ತೊಮ್ಮೆ ಸಭೆ ನಡೆಸಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಹೀಗಾಗಿ ಹೊಸ ವರ್ಷದಲ್ಲಿ ಜನವರಿ ಆರಂಭದಲ್ಲಿ ಶಾಲೆಗಳು ಪುನರಾರಂಭವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ