ಇನ್ನೆರಡು ವಾರ ಕಾದು ನೋಡಿ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದಲ್ಲೂ ಮೂರನೇ ಅಲೆ ಭೀತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯಲು ದುಡುಕಿನ ನಿರ್ಧಾರ ಕೈಗೊಳ್ಳುವುದು ಬೇಡ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕೋವಿಡ್ ಮೂರನೇ ಅಲೆ ಭೀತಿ ನಡುವೆ ಶಾಲೆಗಳನ್ನು ಆರಂಭಿಸುವುದು ಸೂಕ್ಷ್ಮ ವಿಚಾರ. ಈ ಬಗ್ಗೆ ಕೂಲಂಕುಷವಾಗಿ ಅಧ್ಯಯನ ನಡೆಸಿ, ಇನ್ನೆರಡು ವಾರ ಕಾದು ನೋಡಿ ಶಾಲಾ ಆರಂಭಕ್ಕೆ ಯೋಚಿಸುವುದು ಉತ್ತಮ ಎಂದು ಡಾ.ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಸಧ್ಯಕ್ಕೆ ಶಾಲೆಗಳನ್ನು ಆರಂಭಿಸಲ್ಲ. ಕೋವಿಡ್ ಪ್ರಕರಣ ಹೆಚ್ಚುತ್ತಿರುವುದರಿಂದ ಕೆಲ ಸಮಯ ನೋಡಿಕೊಂಡು, ನಂತರ ಅಧಿಕಾರಿಗಳ ಜೊತೆ ಚರ್ಚಿಸಿ ಶಾಲೆ ಆರಂಭದ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದ್ದರು.
ಇದರ ಬೆನ್ನಲ್ಲೇ ಆ.2ರಿಂದ ಶಾಲೆಗಳನ್ನು ತೆರೆಯಲು ಮುಂದಾಗಿದ್ದ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಕೂಡ ಸದ್ಯಕ್ಕೆ ಶಾಲೆ ತೆರೆಯದಿರಲು ನಿರ್ಧರಿಸಿದೆ.
ಮಂತ್ರಿ ಸ್ಥಾನಕ್ಕಾಗಿ ಕೊನೇ ಕ್ಷಣದ ಕಸರತ್ತು; ಬಿಎಸ್ ವೈ ಭೇಟಿಯಾದ ಶಾಸಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ