ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಫೆ.22ರಿಂದ 1-5 ನೇ ತರಗತಿಗಳವರೆಗೆ ವಿದ್ಯಾಗಮ ನಡೆಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ, ಫೆ.22ರಿಂದ 1-5ನೇ ತರಗತಿವರೆಗೆ ವಿದ್ಯಾಗಮ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ ವಿದ್ಯಾಗಮ ನೋಡಿಕೊಂಡು ಶೀಘ್ರದಲ್ಲೇ ಶಾಲೆಗಳ ಆರಂಭಕ್ಕೆ ಒಪ್ಪಿಗೆ ಸೂಚಿಸಿದೆ.
ಫೆ.22ರಿಂದ 6-8ನೇ ತರಗತಿವರೆಗೆ ಬೌತಿಕವಾಗಿ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ಕೂಡ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಒಂದು ವರ್ಷದ ಬಳಿಕ ಶಾಲೆಗಳ ಪುನರಾರಂಭಕ್ಕೆ ಮುಹೂರ್ತ ನಿಗದಿಯಾದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ