
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಆತಂಕದ ನಡುವೆ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಾಳೆ ಮಹತ್ವದ ನಿರ್ಧಾರ ಪ್ರಕಟಿಸಲಿದೆ.
ಶಾಲೆ ಆರಂಭದ ಬಗ್ಗೆ ಶಿಕ್ಷಣ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಇಂದು ನಡೆಸಬೇಕಿದ್ದ ಮಹತ್ವದ ಸಭೆ ನಾಳೆಗೆ ಮುಂದೂಡಿಕೆಯಾಗಿದೆ. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಶಾಲೆ ಆರಂಭದ ಬಗ್ಗೆ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಸಭೆಯನ್ನು ನಾಳೆ ಮುಂದೂಡಲಾಗಿದೆ.
ಶಾಲೆ ಆರಂಭಿಸುವ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಮಾರ್ಗಸೂಚಿಗಳ ಬಗ್ಗೆ ಈಗಾಗಲೇ ಶಾಸಕರು, ಸಂಸದರಿಂದ ಶಿಕ್ಷಣ ಇಲಾಖೆ ಅಭಿಪ್ರಾಯ ಸಂಗ್ರಹಿಸಿದ್ದು, ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ