ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭ ಮಾಡುವ ಬಗ್ಗೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇಲಾಖೆ ವರದಿ ಸಲ್ಲಿಸಲಾಗುವುದು. ಸಿಎ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಜೂನ್ ತಿಂಗಳಿನಲ್ಲಿಯೇ ಶಾಲೆ ಆರಂಭ ಮಾಡಬೇಕಿತ್ತು. 6 ತಿಂಗಳು ವಿಳಂಬವಾಗಿದೆ. ಶಾಲೆಗಳಿಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳು ಬಾಲಕಾರ್ಮಿಕರಾಗುತ್ತಿದ್ದಾರೆ. ಹಲವೆಡೆ ಬಾಲ್ಯ ವಿವಾಹಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಶಾಲೆ ಆರಂಭ ವಿಳಂಬವಾಗುತ್ತಿರುವುದರಿಂದ ಹಲವಾರು ಸಮಸ್ಯೆಗಳು ಸೃಷ್ಟಿಯಾಗುತ್ತಿದೆ. ಹೀಗಾಗಿ ಇದೆಲ್ಲವುಗಳ ಬಗ್ಗೆ ಪೋಷಕರು, ಶಿಕ್ಷಕರು, ಆರೋಗ್ಯ ಇಲಾಖೆ ಅಧಿಕಾರಿಗಳು, ಶಾಲಾ ಆಡಳಿತ ಮಂಡಳಿ, ಎಸ್ ಡಿಎಂ ಎಲ್ಲರೊಂದಿಗೂ ಚರ್ಚಿಸಿ ವರದಿ ಸಿದ್ಧಪಡಿಸಿದ್ದೇವೆ ಎಂದರು.
ಈ ವರದಿಯನ್ನು ಇಂದು ಸಿಎಂ ಯಡಿಯೂರಪ್ಪನವರಿಗೆ ಸಲ್ಲಿಸಲಾಗುತ್ತದೆ. ಬಳಿಕ ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆದು, ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ