Cancer Hospital 2
Laxmi Tai Society2
Beereshwara add32

*ಶಾಲಾ ಕ್ರೀಡಾಕೂಟದ ವೇಳೆ ದುರಂತ; ವಿದ್ಯುತ್ ಅವಘಡಕ್ಕೆ ಓರ್ವ ಸಾವು; 10 ಜನರಿಗೆ ಗಾಯ*

Anvekar 3

ಪ್ರಗತಿವಾಹಿನಿ ಸುದ್ದಿ: ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಗೌರಿಬಿದನೂರಿನ ಶಾರದಾ ಶಾಲೆಯಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ಹಾಕಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿದ್ದು, ಓರ್ವರು ಮೃತಪಟ್ಟಿದ್ದಾರೆ.

ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಮೃತ ದುರ್ದೈವಿ. 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Emergency Service


Gokak Jyotishi add 8-2
Bottom Add3
Bottom Ad 2

You cannot copy content of this page