Latest

Breaking News- ಶಾಲೆ ಆರಂಭಕ್ಕೆ ಮಾರ್ಗಸೂಚಿ ಪ್ರಕಟ -ಇಲ್ಲಿದೆ ಸಮಗ್ರ ವಿವರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಗಸ್ಟ್ 23ರಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಕೊರೊನಾ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭವಾಗಲಿದೆ.

9 ಹಾಗೂ 10ನೇ ತರಗತಿಗಳಿಗೆ ಆ.23ರಿಂದ ಅರ್ಧದಿನ ಮಾತ್ರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದೆ.

* ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ಕಡ್ಡಾಯ
* ಕೋವಿಡ್ ಲಕ್ಷಣಗಳು ಇಲ್ಲದಿರುವ ಬಗ್ಗೆ ಪೋಷಕರು ದೃಢಪಡಿಸಬೇಕು
* ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10-1:30 ಗಂಟೆಯವರೆಗೆ ತರಗತಿಗಳು ನಡೆಯಲಿವೆ
* ಶನಿವಾರ ಬೆಳಿಗ್ಗೆ 10ರಿಂದ 12:30ವರೆಗೆ ಮಾತ್ರ ತರಗತಿಗಳು
* ವಿದ್ಯಾರ್ಥಿಗಳು ಮನೆಯಿಂದಲೇ ಊಟ/ ಕುಡಿಯುವ ನೀರು ತರಬೇಕು
* ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ದಾಯ
* ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ಹಾಜರಾಗಬಹುದು
* ಅಗತ್ಯವಿದ್ದರೆ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶುದ್ಧ ಬಿಸಿ ಕುಡಿಯುವ ನೀರಿನ ವ್ಯವಸ್ಥೆ
* ಶಿಕ್ಷಕರು 15-20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿ ಭೌತಿಕ ತರಗತಿ ನಡೆಸಬೇಕು

ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ –

SOP 16-08-2021

9&10 School open Order 16-08-2021

ಉಳಿತಾಯ: ತಪ್ಪು ತಿಳಿವಳಿಕೆಯಿಂದ ಮೊದಲು ಹೊರ ಬನ್ನಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button