*ಶಾಲೆ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಶಾಲಾ ಕಟ್ಟಡದ ಮೇಲಿಂದ ಜಿಗಿದು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಜಲ್ನಾದಲ್ಲಿ ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿ ಇಂದು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯ ಕಟ್ಟಡದ ಮೂರನೇ ಮಹಡಿಯಿಂದ ಹಾರಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಿದ್ದಾರೆ. ಶಿಕ್ಷಕರ ಮಾನಸಿಕ ಕಿರುಕುಳಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಾಲಕಿ ತಂದೆ ಅಳಲು ತೋಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ … Continue reading *ಶಾಲೆ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ*