ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ಯೂನ್ ನಿಂದಲೇ ಅತ್ಯಾಚಾರ ನಡೆದಿದ್ದು, ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಫಾರೂಕಾಬಾದ್ ನಲ್ಲಿ ನಡೆದಿದೆ.
13 ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿರಂತರ ಅತ್ಯಾಚಾರವೆಸಗಿದ್ದು, ಇದೀಗ ಬಾಲಕಿ ಗರ್ಭಿಣಿಯಾಗಿದ್ದಾಳೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ತಿಳಿದ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶಾಲೆಯಲ್ಲಿ ವಿದ್ಯಾರ್ಥಿನಿ ವಾಶ್ ರೂಮ್ ಗೆ ಹೋಗಿದ್ದಾಗ ಆಕೆಯನ್ನು ಹೊತ್ತೊಯ್ದ ಪಂಕಜ್ ಹಾಗೂ ಅಮಿತ್ ಎಂಬಾತ ಖಾಲಿ ಮನೆಗೆ ಕರೆದೊಯ್ದಿದ್ದಾರೆ. ಅಲ್ಲಿ ಪಂಕಜ್ ಹೊರಗೆ ಕಾವಲು ಕಾಯುತ್ತಿದ್ದರೆ ಮನೆಯ ಒಳಗೆ ಅಮಿತ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಕೃತ್ಯದ ಬಳಿಕ ಬಾಲಕಿಗೆ ಬೆದರಿಕೆ ಹಾಕಲಾಗಿದೆ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದಾರೆ. ಇದೀಗ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ತಾಯಿ ಮಗಳ ಬಾಯ್ಬಿಡಿಸಿದ್ದಾಳೆ ಎಂದು ಪೊಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ