*ಶಾಲೆಯಲ್ಲಿಯೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಅತ್ಯಾಚಾರ ನಡೆದಿರುವ ಘೋರ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
10 ವರ್ಷದ ಬಾಲಕಿ ಮೇಲೆ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲನೇ ಈ ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ.
ವರ್ತೂರು ಬಳಿಯ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಪೈಶಾಚಿಕ ಕೃತವೆಸಗಲಾಗಿದೆ. ಸ್ಥಳಕ್ಕೆ ವರ್ತೂರು ಪೊಲೀಸರು ಭೇಟಿ ನೀಡಿದ್ದು, ಪ್ರಾಂಶುಪಾಲನನ್ನು ವಶಕ್ಕೆ ಪಡೆದು ವಿಚರಣೆ ನಡೆಸಿದ್ದಾರೆ.
ವಿದ್ಯಾರ್ಥಿನಿ ಎಂದಿನಂತೆ ನಿನ್ನೆ ಶಾಲೆಗೆ ಆಗಮಿಸಿದ್ದು, ಈ ವೇಳೆ ವಿದ್ಯಾರ್ಥಿನಿಯನ್ನು ಖಾಲಿ ರೂಮಿಗೆ ಕರೆದೊಯ್ದು ಪ್ರಾಂಶುಪಾಲ ಅತ್ಯಾಚರವೆಸಗಿದ್ದಾನೆ. ಮನೆಗೆ ಬಂದ ವಿದ್ಯಾರ್ಥಿನಿ ನೋವಿನಿಂದ ಒದ್ದಾಡಿದ್ದು, ಈ ವೇಳೆ ಪೋಷಕರು ವಿಚಾರಿಸಿದಾಗ ನಡೆದ ಘಟನೆ ಹೇಳಿದ್ದಾಳೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿದೆ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದಳು. ಗಂಜೂರು ಸಮೀಪ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದಳು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ