ಪ್ರಗತಿವಾಹಿನಿ ಸುದ್ದಿ; ಚೆನ್ನೈ; ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿಯೇ ವಿದ್ಯಾರ್ಥಿಗಳು ಬೀಯರ್ ಸೇವಿಸುತ್ತಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಭಾರಿ ವೈರಲ್ ಆಗಿದೆ.
ಶಾಲಾ ಸಮವಸ್ತ್ರಧರಿಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬಸ್ ನೊಳಗೆ ಬಿಯರ್ ಬಾಟಲ್ ಓಪನ್ ಮಾಡಿ ಕುಡಿಯುತ್ತಿದ್ದು, ಅದೇ ಬಸ್ನಲ್ಲಿದ್ದ ವಿದ್ಯಾರ್ಥಿಯೋರ್ವ ಈ ದೃಶ್ಯ ಸೆರೆಹಿಡಿದಿದ್ದಾನೆ.
ಎಲ್ಲಾ ವಿದ್ಯಾರ್ಥಿಗಳು ಚೆಂಗಲ್ಪಟ್ಟುವಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದು, ತಿರುಕಝುಕುಂದ್ರಂನಿಂದ ತಾಚೂರ್‌ಗೆ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲಿಸರು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮೂರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ; ರಕ್ತಸ್ರಾವದಿಂದ ಮೃತಪಟ್ಟ ಮಗು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ