EducationKarnataka News

*ಶಿಕ್ಷಕರ ವಿರುದ್ಧ FIR : ಶಿಕ್ಷಣ ಇಲಾಖೆ ಹೊಸ ಆದೇಶ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ, ಶಿಕ್ಷಕರ ಸ್ಕೂಟರ್, ಬೈಕ್, ಕಾರುಗಳನ್ನು ತೊಳೆಸುವ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಶಾಲಾ ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದೆ.

ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ ಎಂದು ಈ ಹಿಂದೆಯೇ ಶಿಕ್ಷಣ ಇಲಾಖೆ ಸೂಚಿಸಿತ್ತು. ಆದಾಗ್ಯೂ ಶಿಕ್ಷಕರಾಗಲಿ, ಶಾಲಾ ಆಡಳಿತ ಮಂಡಳಿಗಳಾಗಲಿ ಎಚ್ಚೆತ್ತುಕೊಂಡಂತಿಲ್ಲ. ಮತ್ತೆ ಮತ್ತೆ ಅಂತದ್ದೇ ಪ್ರಕರಣಗಳು ಮರುಕಳಿಸುತ್ತಿವೆ.

ಈ ಹಿನ್ನೆಲೆಯಲ್ಲಿ ಮಕ್ಕಳಿಂದ ಶಾಲೆಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿದರೆ ಶಿಕ್ಷಕರ ವಿರುದ್ಧ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Home add -Advt


Related Articles

Back to top button