Latest

15,000 ಶಿಕ್ಷಕರ ನೇಮಕ ; ನೇಮಕಾತಿ ಪ್ರಕ್ರಿಯೆ ವಿವರ ನೀಡಿದ ಸಚಿವ ಬಿ.ಸಿ.ನಾಗೇಶ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1-8ನೇ ತರಗತಿ ಶಾಲೆಗಳಲ್ಲಿ 36,000 ಶಿಕ್ಷಕರ ಕೊರತೆಯಿದೆ. ಅದರಲ್ಲಿ 21 ಸಾವಿರ ಗಣಿತ ಶಿಕ್ಷಕರ ಕೊರತೆಯಿದೆ. ಹೀಗಾಗಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ನೇಮಕಾತಿಗೆ ಇಲಾಖೆ ಮುಂದಾಗಿದೆ ಎಂದರು.

ಹೈದರಾಬಾದ್-ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದ್ದು, ಉಳಿದೆಡೆ 10 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ. ಗಣಿತ ಶಿಕ್ಷಕರ ನೇಮಕಾತಿಗಾಗಿ ಮಾರ್ಚ್ 23ರರಿಂದ ಆನ್ ಲೈನ್ ನಲ್ಲಿ ಅರ್ಜಿಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 23 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಮೇ 21 ಹಾಗೂ 22ರಂದು ಶಿಕ್ಷಕರಿಗೆ ಪರೀಕ್ಷೆ ನಿಗದಿಯಾಗಿದೆ. ಈ ಬಾರಿ ಎಂಜಿನಿಯರಿಂಗ ಪದವಿಧರರು ಕೂಡ ಗಣಿತ ಶಿಕ್ಷಕರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

400 ಅಂಕಗಳ ಪರೀಕ್ಷೆ ನಡೆಯಲಿದ್ದು, ಮೊದಲ ಪತ್ರಿಕೆ ಜನರಲ್ ಪೇಪರ್-150 ಅಂಕ ನಿಗದಿಯಾಗಿದೆ. 2ನೇ ಪತ್ರಿಕೆ ವಿಷಯವಾರು- 150 ಮಾರ್ಕ್ ಇರುತ್ತೆ. ಪಾಸ್ ಆಗಲು 45 ಮಾರ್ಕ್ಸ್ ಕಡ್ಡಾಯ. 3 ನೇ ಪತ್ರಿಕೆ ಭಾಷಾವಾರು ಪರೀಕ್ಷೆಯಾಗಿದ್ದು, 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪಾಸ್ ಆಗಲು 50 ಮಾರ್ಕ್ಸ್ ಕಡ್ಡಾಯವಾಗಿದೆ ಎಂದು ವಿವರಿಸಿದರು.

Home add -Advt

ಪಠ್ಯಕ್ರಮದಲ್ಲಿ ಭಗವದ್ಗೀತೆ ವಿಚಾರ; ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Related Articles

Back to top button