EducationKannada NewsKarnataka NewsLatest

*ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಶಾಲಾ ಶಿಕ್ಷಕಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬರು ನೇಣಿಗೆ ಕೊರಳೊಡ್ದಿರುವ ಘಟನೆ ಬೆಂಗಳೂರೂ ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.

40 ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ಮನೆಯಲ್ಲಿ ಜ್ಯೋತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

12 ವರ್ಷಗಳ ಕಾಲ ಬನವತಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಜ್ಯೋತಿ, ಕಳೆದ 9 ತಿಂಗಳ ಹಿಂದಷ್ಟೇ ತುರುವಿನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡು ಕಾರ್ಯನಿರ್ವಹಿಸುತ್ತಿದ್ದರು. ಈ ನಡುವೆ ಮತ್ತೊಂದು ಶಾಲೆಗೆ ವರ್ಗಾವಣೆಗೆ ಪ್ರಯತ್ನಿಸುತ್ತಿದ್ದರು.

ಜ್ಯೋತಿಗೆ ವಿವಾಹವಾಗಿ 13 ವರ್ಷಗಳಾದರೂ ಮಕ್ಕಳಿರಲಿಲ್ಲ. ಇದೇ ಕಾರಣಕ್ಕೆ ಮಾನಸಿಕವಾಗಿ ನೊಂದು ಖಿನ್ನತೆಗೆ ಒಳಗಾಗಿದ್ದರು. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಶಿಕ್ಷಕಿ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ದೊಡ್ಡಬಳ್ಳಾಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತೊಯಲ್ಲಿ ಘಟನೆ ನಡೆದಿದೆ.


Related Articles

Back to top button