Kannada NewsKarnataka NewsLatestPolitics

*ಶಾಲಾ ಸಮಯ ಬದಲಾವಣೆ; ಶಿಕ್ಷಣ ಇಲಾಖೆ ಕರೆದಿದ್ದ ಸಭೆ ದಿಢೀರ್ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ನಿಗದಿಯಾಗಿದ್ದ ಶಿಕ್ಷಣ ಇಲಾಖೆಯ ಮಹತ್ವದ ಸಭೆ ದಿಢೀರ್ ಮುಂದೂಡಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಶಾಲಾ ಸಮಯ ಬದಲಾವಣೆ ಮಾಡುವ ನಿಟ್ಟಿನಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟ, ಪೊಲೀಸ್ ಅಧಿಕಾರಿಗಳು, ಪೋಷಕರ ಒಕ್ಕೂಟ, ಖಾಸಗಿ ಶಾಲಾ ವಾಹನಗಳ ಮಾಲೀಕರ ಸಂಘ, ಸಾರಿಗೆ ಅಧಿಕಾರಿಗಳು, ತಜ್ಞರ ನೇತೃತ್ವದಲ್ಲಿ ಇಂದು ಶಿಕ್ಷಣ ಇಲಾಖೆ ಸಭೆ ನಿಗದಿ ಮಾಡಿತ್ತು. ಆದರೆ ಕೊನೇ ಕ್ಷಣದಲ್ಲಿ ಸಭೆ ಮುಂದೂಡಿಕೆಯಾಗಿದೆ. ಅಕ್ಟೋಬರ್ 9 ರಂದು ಸಭೆ ನಿಗದಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಪ್ರತಿ ದಿನ ಉಂಟಾಗುವ ಟ್ರಾಫಿಕ್ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ಶಾಲೆಗಳು, ಕೈಗಾರಿಕೆಗಳ ಕಾರ್ಯನಿರ್ವಹಣೆಯ ಸಮಯವನ್ನು ಬದಲಾವಣೆ ಮಾಡಲು ಹೈಕೋರ್ಟ್ ಸಲಹೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದ್ದು, ಅ.9ರಂದು ನಡೆಯಲಿರುವ ಸಭೆಯಲ್ಲಿ ಮಹತ್ವದ ನಿರ್ಧರ ಪ್ರಕಟವಾಗಲಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button