Belagavi NewsBelgaum NewsKannada NewsKarnataka News
*ಶಾಲಾ ವಾಹನ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ*

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸ್ಕೂಲ್ ವಾಹನ ಪಲ್ಟಿಯಾಗಿದ್ದು, ಹಲವಾರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಕಾಕ ತಾಲೂಕಿನ ಮರಡಿಮಠ ಗ್ರಾಮದ ಜೈ ಹನುಮಾನ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಭಾಗದ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಒಂದೆ ಬಸ್ ನಲ್ಲಿ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತುಂಬಿಕೊಂಡು ಬಸ್ ಹೊತಟಿತು ಎನ್ನಲಾಗಿದೆ. ಈ ಅಪಘಾತದಲ್ಲಿ 20 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಇತರ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ