
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ರಾಜ್ಯಾದ್ಯಂತ ಶಾಲೆಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಿದೆ.
ಪ್ರತಿದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳಿಗೆ ಅವಕಾಶ ನೀಡಲಾಗಿದೆ. ಮಕ್ಕಳು ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ.
ವಿದ್ಯಾರ್ಥಿಗಳಿಗೆ ಭೌತಿಕ ಹಾಜರಾತಿ ಕಡ್ಡಾಯವಿಲ್ಲ
ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ಕಡ್ಡಾಯ
ಮಕ್ಕಳಿಗೆ ಕೊರೊನಾ ಲಕ್ಷಣ ಇಲ್ಲ ಎಂದು ಪೋಷಕರಿಂದ ದೃಢೀಕರಣ
ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲೂ ಹಾಜರಾತಿಗೆ ಅವಕಾಶ
ಆಯಾ ಕಾಲಕ್ಕೆ ಸರ್ಕಾರದ ಸೂಚನೆ ಪಾಲಿಸುವುದು ಕಡ್ಡಾಯ