EducationKarnataka NewsLatest

*ಶಾಲೆಗಳಲ್ಲಿ ಇನ್ಮುಂದೆ ನ್ಯೂಸ್ ಪೇಪರ್ ಓದುವುದು ಕಡ್ಡಾಯ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಇನ್ಮುಂದೆ ನ್ಯೂಸ್ ಪೇಪರ್ ಓದುವುದನ್ನು ಕಡ್ಡಾಯಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲೆಗಳಲ್ಲಿ ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಿಗೂ ಅನ್ವಯವಾಗುತ್ತದೆ.

Home add -Advt

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಮಾಡಿತ್ತು. ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆಯು, ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಈಗಾಗಲೇ ಹಲವು ಶಾಲೆಗಳಲ್ಲಿ ಪ್ರಾರ್ಥನೆಯ ಸಮಯದಲ್ಲಿ ನ್ಯೂಸ್ ಪೇಪರ್ ಓದಿಸುವ ಅಭ್ಯಾಸವಿದೆ. ಇನ್ಮುಂದೆ ಪ್ರಾರ್ಥನೆಯ ನಂತರದ 10-15 ನಿಮಿಷಗಳನ್ನು ಪ್ರತ್ಯೇಕವಾಗಿ ಪತ್ರಿಕೆ ಓದುವುದಕ್ಕಾಗಿಯೇ ಮೀಸಲಿಡಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related Articles

Back to top button