EducationKannada NewsKarnataka NewsLatest

*ಶಾಲೆಯಲ್ಲಿ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿ*

ಪ್ರಗತಿವಾಹಿನಿ ಸುದ್ದಿ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಪಾಠ ಮಾಡಬೇಕಾದ ಶಿಕ್ಷಕರೆ ಹೊಡೆದಾಟಕ್ಕೆ ಇಳಿದರೆ ವಿದ್ಯಾರ್ಥಿಗಳಿಗೆ ಏನು ಕಲಿಸುತ್ತಾರೆ? ಇಲ್ಲೊಂದು ಘಟನೆಯಲ್ಲಿ ಬಡ್ತಿ ವಿಚಾರವಾಗಿ ಪ್ರಾಂಶುಪಾಲರು ಹಾಗೂ ಶಿಕ್ಷಕಿ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಕ್ಲಾಸ್​​ ರೂಮ್​​​ನಲ್ಲಿ ಶಿಕ್ಷಕರೇ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಗಲಾಟೆ ನಡೆದಿದೆ.

ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು ಹಾಗೂ ಶಿಕ್ಷಿಕಿಯ ಕಡೆಯವರು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಹೊಡೆದಾಡಿದ್ದಾರೆ. ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಅವರು ಹೊರಗಿನ ಜನರನ್ನು ಕರೆಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಿಕ್ಷಕಿ ರೇಷ್ಮಾ ಆರೋಪಿಸಿದ್ದಾರೆ. ಈ ಬಗ್ಗೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Home add -Advt

Related Articles

Back to top button