
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಹಾಗೂ ಅನುಸರಿಸಬೇಕಾದ ಮಾರ್ಗಸೂಚಿ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಎಲ್ಲಾ ರಾಜ್ಯಗಳಿಗೆ ಸಲಹೆ ನೀಡಲಿದೆ.
ಶಾಲಾ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನೇಷನ್ ವೇಗ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಷ್ಟ್ರವ್ಯಾಪಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಹಾಗೂ ವಿಧಾನಗಳ ಕುರಿತು ರಾಷ್ಟ್ರೀಯ ತಜ್ಞರ ಸಲಹೆ ಕೇಳಿದ್ದಾರೆ.
ಕೊರೊನಾ ಸೋಂಕು ಎಲ್ಲಾ ವಯಸ್ಸಿನ ಮಕ್ಕಳ ಮೇಲೆ ಪರಿಣಾಮ ಬೀರಿದೆ. ಆದರೂ ಮಕ್ಕಳಲ್ಲಿ ಮರಣ ಪ್ರಮಾಣ, ರೋಗದ ತೀವ್ರತೆ ಅತ್ಯಲ್ಪವಾಗಿದೆ. ಹಾಗಾಗಿ ಮಕ್ಕಳು ಶಾಲೆಗೆ ಮರಳಲು ಇದು ಸರಿಯಾದ ಸಮಯವಾಗಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
15-18 ವರ್ಷದ ವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಮಾಹಿತಿ ನೀಡಲಿದೆ.
ಹುಟ್ಟುಹಬ್ಬದ ಅಂಗವಾಗಿ ಗೋಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ