ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 6-8ನೇ ತರಗತಿ ಶಾಲೆಗಳು ಆರಂಭವಾಗಿದ್ದು, ಕೇರಳ ಗಡಿ ಭಾಗ ಹಾಗೂ ಬೆಂಗಳೂರು ನಗರ ಹೊರತುಪಡಿಸಿ ಉಳಿದ ಕಡೆಗಳಲ್ಲಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭವಾಗಿವೆ.
ಜುಲೈ 15ರಿಂದ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಪೂರ್ಣ ಪ್ರಮಾಣದ ಶಾಲೆಗಳು ಆರಂಭವಾಗಿವೆ.
ಬೆಂಗಳೂರು ಮತ್ತು ಕೇರಳ ಗಡಿ ಭಾಗದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಎದ್ದಿರುವುದರಿಂದ ಆ ಭಾಗದಲ್ಲಿ 8ನೇ ತರಗತಿ ಶಾಲೆಗಳನ್ನು ಮಾತ್ರ ತೆರೆಯಲು ನಿರ್ಧರಿಸಲಾಗಿದೆ. 1ರಿಂದ 5ನೇ ತರಗತಿಗಳನ್ನು ಆರಂಭಿಸುವ ಬಗ್ಗೆಯೂ ಸರ್ಕಾರ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ.
ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗದ 6 ಮತ್ತು 7ನೇ ತರಗತಿಗೆ ವಿದ್ಯಾಗಮ ನಡೆಸಲಾಗುತ್ತಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲಿ 6,7, 8ನೇ ತರಗತಿಗೆ ಭೌತಿಕ ಕ್ಲಾಸ್ ಇಂದಿನಿಂದ ಶುರುವಾಗಿದೆ. 6ರಿಂದ 10ನೇ ತರಗತಿಗೆ ವಾರದಲ್ಲಿ 5 ದಿನ ಬೆಳಗ್ಗೆ 10 ರಿಂದ 4.30ರವರೆಗೆ ತರಗತಿಗಳು ನಡೆಯಲಿವೆ. ಶನಿವಾರದಂದು ಬೆಳಗ್ಗೆ 10.30ರಿಂದ 12.30ರವರೆಗೆ ತರಗತಿ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ