ನಾಳೆ, ನಾಡಿದ್ದು ಶಾಲೆಗಳಿಗೆ ರಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದೆ. ಮಹಾರಾಷ್ಟ್ರದಲ್ಲೂ ಅಬ್ಬರದ ಮಳೆ ಸುರಿಯುತ್ತಿದೆ. ಇದರಿಂದಾಗಿ ಬೆಳಗಾವಿ ಜಿಲ್ಲೆಯ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅನೇಕ ಕಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆ ಸಂಪರ್ಕ ಕಡಿತಗೊಂಡಿವೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರಜೆ ನೀಡುವಂತೆ ಸಂಬಂಧಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಸ್ತಾವನೆ ಪರಿಶೀಲಿಸಿರುವ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಲ್ಲ ಶಾಲೆಗಳಿಗೆ (ರಾಮದುರ್ಗ ಹೊರತುಪಡಿಸಿ) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 6 ಮತ್ತು 7ರಂದು ಎರಡು ದಿನ ರಾಮದುರ್ಗ ತಾಲೂಕು ಹೊರತುಪಡಿಸಿ, ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂಬರುವ ಭಾನುವಾರಗಳಂದು ಶಾಲೆ ನಡೆಸಿ ಪಠ್ಯ ಬೋಧನೆಯನ್ನು ಸರಿದೂಗಿಸುವಂತೆ ಸೂಚಿಸಲಾಗಿದೆ.
ಹಾಗೆಯೇ ಅನೇಕ ಕಡೆ ಶಾಲೆಗಳು ಶಿಥಿಲಗೊಂಡಿರುವುದರಿಂದ ಮಕ್ಕಳನ್ನು ಅಂತಹ ಶಿಥಿಲ ಕೊಠಡಿಗಳಲ್ಲಿ ಕೂಡ್ರಿಸದಂತೆ ಸೂಚಿಸಲಾಗಿದೆ.
ಇದನ್ನೂ ಓದಿ – ನಾಳೆ 4 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ
ಪ್ರವಾಹ ಮುನ್ನೆಚ್ಚರಿಕೆ ಕ್ರಮ; ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ
ಪ್ರವಾಹ ಭೀತಿ: ಜನ, ಜಾನುವಾರಗಳ ಸ್ಥಳಾಂತರಕ್ಕೆ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ