ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿನ ಪ್ರಸ್ತುತ ಸನ್ನಿವೇಶ ಗಮನದಲ್ಲಿರಿಸಿಕೊಂಡು ಶಾಲೆಗಳ ರಜಾ ಅವಧಿ ಪರಿಷ್ಕಕರಿಸಲಾಗಿದೆ ಎಂದು ಹೇಳಿದರು.
ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೆ ಹಾಗೂ ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಆರಭವಾಗುತ್ತವೆ ಎಂದು ತಿಳಿಸಿದರು.
ಜೂನ್ 1ರಿಂದ 14ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳು ಆರಂಭವಾಗುತ್ತವೆ. ಪ್ರೌಢಶಾಲಾ ಶಿಕ್ಷಕರು ರಜೆ ಅವಧಿಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ