Cancer Hospital 2
Beereshwara 36
LaxmiTai 5

*ಬಿಜೆಪಿ ಶಾಸಕನ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ SDA*

Anvekar 3

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಬಿಜೆಪಿ ಶಾಸಕರೊಬ್ಬರ ಹೆಸರು ಬರೆದಿಟ್ಟು ದ್ವಿತೀಯ ದರ್ಜೆ ಸಹಾಯಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಜಾನಕಲ್ ನಲ್ಲಿ ನಡೆದಿದೆ.

ತಿಪ್ಪೇಸ್ವಾಮಿ ಆತ್ಮಹತ್ಯೆಗೆ ಶರಣಾಗಿರುವ ಎಸ್ ಡಿ ಎ. ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ಎಸ್ ಡಿಎ ಆಗಿದ್ದ ತಿಪ್ಪೇಸ್ವಾಮಿ, ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಹಾಗೂ ಕೆಲ ಗ್ರಾಮ ಪಂಚಾಯಿತಿ ಸದಸ್ಯರು ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದು ಸಾವಿಗೆ ಶರಣಾಗುತ್ತಿರುವುದಾಗಿ ಉಲ್ಲೇಖಿಸಿದ್ದಾರೆ.

Emergency Service

ಡೆತ್ ನೋಟ್ ನಲ್ಲಿ ಶಾಸಕ ಚಂದ್ರಪ್ಪ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಲವ, ರಾಜಪ್ಪ ವಿರುದ್ಧ ಆರೋಪ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಎಂ.ಚಂದ್ರಪ್ಪ, ಎಸ್ ಡಿಎ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ, ಆತ ಯಾರೆಂಬುದು ನನಗೆ ಗೊತ್ತಿಲ್ಲ, ನಾನು ಆತನ ಮುಖವನ್ನೂ ನೋಡಿಲ್ಲ. ಎಸ್ ಡಿಎ ಮೂಲಕ ನಾನು ಯಾವುದೇ ಕೆಲಸ ಮಾಡಿಕೊಳ್ಳಬೇಕಾದ ಅಗತ್ಯವೇ ಬರುವುದಿಲ್ಲ. ಹೀಗಿರುವಾಗ ನನ್ನ ವಿರುದ್ಧ ಆರೋಪ ಯಾಕೆ ಮಾಡಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ.


Bottom Add3
Bottom Ad 2