ಪ್ರಗತಿವಾಹಿನಿ ಸುದ್ದಿ; ಧಾರವಾಡ: ರಾಜ್ಯಾದ್ಯಂತ ಮಳೆ ಅಬ್ಬರದ ನಡುವೆಯೇ ಮತ್ತೆ ಕರೋನಾ ಕಾಟ ಆರಂಭವಾದಂತಿದೆ. ಇದೀಗ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಸತ್ತೂರು ಬಡಾವಣೆಯಲ್ಲಿರೋ ಎಸ್ ಡಿಎಂ ವೈದ್ಯಕೀಯ ಕಾಲೇಜಿನ 4 ವಿದ್ಯಾರ್ಥಿಗಳಿಗೆ ಆರಂಭದಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ 300 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಇನ್ನೂ 200 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಸದ್ಯ ಕಾಲೇಜಿನ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ವಿದ್ಯುತ್ ತಂತಿ ತಗುಲಿ ರೈತ ಸಾವು; ಮಾಲೀಕನನ್ನು ಹೊಡೆದು ಕೊಂದ ಗ್ರಾಮಸ್ಥರು; ಭೀಕರ ಘಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ