Kannada NewsKarnataka NewsLatest

*SDPI ರಾಜ್ಯಾಧ್ಯಕ್ಷ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಎಸ್ ಡಿ ಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.

Home add -Advt

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಇಂದು ಬೆಳಿಗ್ಗೆ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ನೋಡನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.


Related Articles

Back to top button