Karnataka News
2ನೇ ಬೂಸ್ಟರ್ ಡೋಸ್ ಅಗತ್ಯವೇ? : ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ

ಪ್ರಗತಿ ವಾಹಿನಿ ಸುದ್ದಿ, ನವದೆಹಲಿ: ದೇಶದಲ್ಲಿ ಸದ್ಯ ಕೋವಿಡ್ ಸೋಂಕಿನ ಪ್ರಸರಣ ಕಡಿಮೆ ಇದೆ. ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಅಗತ್ಯವಿಲ್ಲ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ.
ದೇಶದಾದ್ಯಂತ ಇದುವರೆಗೆ ಒಟ್ಟು 220.11 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.
ಚೀನಾ, ಅಮೆರಿಕ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
https://pragati.taskdun.com/siddeshwar-swamijiall-government-honourfuneralvijaypur/


