ಪ್ರಗತಿವಾಹಿನಿ ಸುದ್ದಿ: ದಶಕಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ವಿಧಾನ ಸಭಾ ಚುನಾವಣೆ ನಡೆಯುತ್ತಿದೆ. ಇಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭ ಆಗಿದ್ದು. ಸೂಕ್ತ ಭದ್ರತೆವದಗಿಸಲಾಗಿದೆ.
ಇಂದು 6 ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 25.78 ಲಕ್ಷ ಅರ್ಹ ಮತದಾರರಿದ್ದಾರೆ. ಚುನಾವಣೆಗೆ ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು. 10 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಎರಡನೇ ಹಂತದ ಚುನಾವಣೆಗೆ ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ದಶಕದ ನಂತರ ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅರ್ಧದಷ್ಟು ಅಭ್ಯರ್ಥಿಗಳು ಕೋಟ್ಯಧಿಪತಿಗಳಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ