*ಲೋಕಸಭಾ ಕಲಾಪದ ವೇಳೆ ಒಳನುಗ್ಗಿ ಅಶ್ರವಾಯು ಸಿಡಿಸಿದ ಅಪರಿಚಿತರು; ಸಂಸತ್ ನಲ್ಲಿ ಭದ್ರತಾ ಲೋಪ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭೆ ಕಲಾಪದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಲೋಕಸಭೆಗೆ ನುಗ್ಗಿ ಅಶ್ರುವಾಯು ಸಿಡಿಸಿದ ಘಟನೆ ನಡೆದಿದೆ.
ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದು, ಕಲಾಪ ನಡೆಯುತ್ತಿದ್ದ ವೇಳೆಯೇ ಇಬ್ಬರು ಗ್ಯಾಲರಿಯಿಂದ ಜಿಗಿದು ಅನಿಲ ಹೊರಸೂಸುವಂತಹ ವಸ್ತುಗಳನ್ನು ಎಸೆದಿದ್ದಾರೆ. ಇಬ್ಬರನ್ನು ತಕ್ಷಣ ಸಂಸದರು ಹಿಡಿದಿದ್ದಾರೆ.
ಈ ವೇಳೆ ಭದ್ರತಾ ಸಿಬ್ಬಂದಿಗಳು ಇಬ್ಬರನ್ನು ಹೊರಗೆ ಕರೆತಂದಿದ್ದಾರೆ. ಬಳಿಕ ಕಲಾಪವನ್ನು ಮದ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಲೋಕಸಭೆಯಲ್ಲಿ ಭದ್ರತಾ ಲೋಪವುಂಟಾಗಿದ್ದು, ವಿಪಕ್ಷ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಕಲಾಪದ ಒಳಗೆ ನುಗ್ಗಿದವರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರಿಬ್ಬರನ್ನು ಸಾಗರ್ ಶರ್ಮಾ ಹಾಗೂ ನೀಲಮ್ ಎಂದು ಗುರುತಿಸಲಾಗಿದೆ. ಇಬ್ಬರೂ ಸಂಸತ್ ಹೊರಗೆ ಪ್ರತಿಭಟನೆಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ