Kannada NewsKarnataka NewsLatest

*ಮಾಜಿ ಮೇಯರ್ ಮನೆಯಲ್ಲಿ 1.30 ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾದ ಸೆಕ್ಯೂರಿಟಿ ಗಾರ್ಡ್*

ಪ್ರಗತಿವಾಹಿನಿ ಸುದ್ದಿ: ನೇಪಾಳ ಮೂಲದ ವ್ಯಕ್ತಿ ಸೆಕ್ಯೂರಿಟಿ ಗಾರ್ಡ್ ಆಗಿ ಮಾಜಿ ಮೇಯರ್ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡು ಸಮಯ ನೋಡಿ ಮನೆಯಲ್ಲಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.‌

Home add -Advt

ಮನೆಗೆ ಕಾವಲಾಗಬೇಕಿದ್ದ ಸೆಕ್ಯೂರಿಟಿ ಗಾರ್ಡ್ ಅದೇ ಮನೆಯಲ್ಲಿ ಚಿನ್ನ, ಬೆಳ್ಳಿ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾಜಿ ಮೇಯರ್, ಬಿಜೆಪಿ ಮುಖಂಡ ಆರ್.ನಾರಾಯಣಸ್ವಾಮಿ ಮನೆಯಲ್ಲಿ ಈ ಘಟನೆ ನಡೆದಿದೆ. ನಾರಾಯಣಸ್ವಾಮಿ ಚುನಾವಣೆ ಪ್ರಚಾರಕ್ಕೆ ಹೋಗಿದ್ದರು. ಮಗ, ಪತ್ನಿ ತಮಿಳುನಾಡಿನ ದೇವಾಲಯಕ್ಕೆ ಹೋಗಿದ್ದರು. ಇದೇ ಸಮಯವನ್ನ  ಬಳಸಿಕೊಂಡು ಸೆಕ್ಯೂರಿಟಿ ಗಾರ್ಡ್ ಮನೆಯಲ್ಲಿದ್ದ 1.30 ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ಓಡಿ ಹೋಗಿದ್ದಾನೆ. ಈ ಕುರಿತು ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

Related Articles

Back to top button