ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಲಕನ ಮೂಲಕ ಲಂಚದ ಹಣ ಪಡೆದಿದ್ದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಸೀಮಾ ಕೆ ಮ್ಯಾಗಿ ಅವರನ್ನು ಅಮಾನತು ಮಾಡಿ ಇಲಾಖೆ ಆದೇಶ ಹೊರಡಿಸಿದೆ.
ಅಧಿಕಾರಿ ಸೀಮಾ ಮ್ಯಾಗಿ ತನ್ನ ಏಜೆಂಟ್ ಶಿವಕುಮಾರ್ ಜೊತೆ ಹಫ್ತಾ ವಸೂಲಿ ಮಾಡುತ್ತಿದ್ದ ಆರೋಪ ಕೇಳಿಬಂದಿತ್ತು. ಬೆಂಗಳೂರಿನ ಪೆಟ್ರೋಲ್ ಬಂಕ್ ಗಳಲ್ಲಿ ಹಫ್ತಾ ವಸೂಲಿ ಮಾಡುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ ಕಾರ್ಯಕರ್ತ ಪಿಳ್ಳಪ್ಪ ಭ್ರಷ್ಟ ಅಧಿಕಾರಿ ವಿರುದ್ಧ ಎಸಿಬಿಗೆ ದೂರು ನೀಡಿದ್ದರು. ರಹಸ್ಯ ಕಾರ್ಯಾಚರಣೆಯಲ್ಲಿ ಕೂಡ ಸೀಮಾ ಲಂಚಾವತಾರ ಬಯಲಾಗಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಕರ್ನಾಟಕ ನಾಗರಿಕ ಸೇವಾ ನಿಯಮ 1966ರ ಸೆಕ್ಷನ್ ಅಡಿಯಲ್ಲಿ ಸೀಮಾ ಮ್ಯಾಗಿಯವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ನೋಕಿಯಾ ಮೊಬೈಲ್ ನ್ನೇ ನುಂಗಿದ ಭೂಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ