
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು.
ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ