ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ : 1,091 ಹುದ್ದೆಗಳಿಗೆ 12,878 ಅರ್ಜಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆಗಾಗಿ ಆಫ್‌ಲೈನ್ ಮೂಲಕ ಆಹ್ವಾನಿಸಿರುವ ಅರ್ಜಿಗಳ ಪರಿಶೀಲನೆಯನ್ನು ಆಯ್ಕೆ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳ ರವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರವರ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಒಟ್ಟೂ 1091 ಹುದ್ದೆಗಳಿಗೆ 12,878 ಅರ್ಜಿಗಳು ಸಲ್ಲಿಕೆಯಾಗಿದ್ದವು.
೨೮೩-ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ೪೭೪೩ ಅರ್ಜಿಗಳು ಹಾಗೂ ೮೦೮-ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ೮೧೩೫ ಅರ್ಜಿಗಳು ಸ್ವೀಕೃತಗೊಂಡಿರುತ್ತವೆ. ಜಿಲ್ಲೆಯ ೧೪ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ತಾಲ್ಲೂಕು ಮಟ್ಟದ ಪರಿಶೀಲನಾ ಸಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗೆ ಮಂಡಿಸಲಾಯಿತು.
ಆಯ್ಕೆ ಕುರಿತು ಉಪಸ್ಥಿತರಿದ್ದ ಸಮಿತಿಯ ಪದಾಧಿಕಾರಿಗಳು ಸುಧೀರ್ಘ ಹಾಗೂ ಪಾರದರ್ಶಕವಾಗಿ ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ೧೪ ದಿನಗಳ ಒಳಗಾಗಿ ಆಕ್ಷೇಪಣೆ ಇದ್ದಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ದಿನಾಂಕ: ೨೧-೦೨-೨೦೨೪ ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲು ತೀರ್ಮಾನಿಸಲಾಯಿತು.
ಆಯ್ಕೆ ಸಮಿತಿ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬೆಳಗಾವಿ ಹಾಗೂ ಆಯ್ಕೆ ಸಮಿತಿ ಉಪಾಧ್ಯಕ್ಷರು, ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಳಗಾವಿ ಆಯ್ಕೆ ಸಮಿತಿ ಸದಸ್ಯರು, ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಆಯ್ಕೆ ಸಮಿತಿ ಸದಸ್ಯರು, ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳಗಾವಿ ಆಯ್ಕೆ ಸಮಿತಿ ಕಾರ್ಯದರ್ಶಿಗಳು, ಜಿಲ್ಲಾ ನಿರೂಪಣಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ