Kannada NewsKarnataka NewsLatestPolitics

*ಲೋಕಸಭೆ ಚುನಾವಣೆ-2024 ಜಾಗೃತಿ ವ್ಯಂಗ್ಯಚಿತ್ರಗಳ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು, ಜನವರಿ ೧೮ ಮುಂಬರುವ ಲೋಕಸಭೆ ಚುನಾವಣೆ-೨೦೨೪ ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ ೨೧ ರಂದು ಬೆಳಗ್ಗೆ ೯ ಗಂಟೆಯಿಂದ ಕಲಾವಿದರಿಗಾಗಿ ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ. ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.


ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ ೧೦೦ ವ್ಯಂಗ್ಯಚಿತ್ರಗಳನ್ನು ಜ.೨೧ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ ೨೫ ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.

ಷರತ್ತು ಹಾಗು ನಿಬಂಧನೆಗಳು
ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು.
ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು ೧೮೦೦ಘಿ೨೪೦೦ ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ ೨೫ ಚಿತ್ರಗಳಿಗೆ ಗೌರವಧನ ನೀಡಲಾಗುವುದು.

ಚಿತ್ರಗಳನ್ನು [email protected] ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ ೧೯-೦೧-೨೦೨೪ ಸಂಜೆ ೫:೦೦ ಗಂಟೆಯ ಒಳಗಾಗಿ
ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ ೨೧-೦೧-೨೦೨೪ ರಂದು ಬೆಳಗ್ಗೆ ೯:೦೦ ಗಂಟೆಗೆ ಹಾಜರಿರಬೇಕು.


ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇ?ದ್ರಿ ರಸ್ತೆ, ಬೆಂಗಳೂರು. ದೂರವಾಣಿ: ೯೪೮೦೮೪೧೨೧೧.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button