Kannada NewsKarnataka NewsLatest

ಬೆಳಗಾವಿಯಲ್ಲಿ ಸೋಮವಾರದಿಂದ ಮತ್ತೆ ಸೆಮಿ ಲಾಕ್ ಡೌನ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮೇ 22ರಿಂದ 24ರ ಬೆಳಗ್ಗೆ 6 ಗಂಟೆಯವರೆಗಿನ ಕಟ್ಟು ನಿಟ್ಟಿನ ಕರ್ಫ್ಯೂ ಮುಕ್ತಾಯವಾಗುತ್ತಿದ್ದಂತೆ ಬೆಳಗಾವಿ ಜಿಲ್ಲೆ ಮತ್ತೆಯ ಸೇಮಿ ಲಾಕ್ ಡೌನ್ ಗೆ ಜಾರುತ್ತಿದೆ.

ಸೋಮವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ.

ಶನಿವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿ ಜಿಲ್ಲಾದ್ಯಂತ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಿಸಲಾಗಿತ್ತು. ಹಾಲು ಮತ್ತು ಔಷಧ ಹೊರತುಪಡಿಸಿ ಯಾವುದೇ ವಸ್ತುಗಳ ಮಾರಾಟ ಮತ್ತು ಖರೀದಿಗೆ ಅವಕಾಶವಿರಲಿಲ್ಲ. ಜಿಲ್ಲೆಯ ಬಹುತೇಕ ಕಡೆ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 7ರ ವರೆಗೂ ರಾಜ್ಯದ ಇತರೆಡೆಯಂತೆ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಾಗಲಿದೆ. ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ. ಆದರೆ 10 ಗಂಟೆಯ ನಂತರ ರಸ್ತೆಗಿಳಿದಲ್ಲಿ ವಾಹನಗಳನ್ನು ಸೀಜ್ ಮಾಡಲಾಗುತ್ತದೆ.

9.45ಕ್ಕೇ ಅಂಗಡಿ ಕ್ಲೋಸ್ ಮಾಡಿ ಮನೆಯ ದಾರಿ ಹಿಡಿಯಬೇಕು. 10 ಗಂಟೆಗೆ ರಸ್ತೆಯ ಮೇಲೆ ಯಾರೂ ಕಾಣಬಾರದು. ಹಾಗೆ ಕಂಡರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೊಲೀಸರಿಗೆ ಆದೇಶ ನೀಡಿದ್ದಾರೆ.

 

ಬೆಳಗಾವಿಯಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್; ಹೊಸ ಆದೇಶ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button