Kannada NewsKarnataka News

ಲೋಗೋ ಕಳಿಸಿ, 25,000 ರೂ. ಗೆಲ್ಲಿ

ಲಾಂಛನ (ಲೋಗೋ) ಮಾದರಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮದುವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದ್ದು, ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು, ಕನ್ನಡ ನಾಡು-ನುಡಿ-ಸಂಸ್ಕತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಅಹ್ವಾನಿಸಲಾಗಿದೆ.
ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ. ೨೫,೦೦೦ ಬಹುಮಾನವನ್ನು ನೀಗದಿಪಡಿಸಲಾಗಿದೆ. ಲಾಂಛನ (ಲೋಗೋ)ದ ಮಾದರಿಯನ್ನು ಕಳುಹಿಸಲು ಸೆ.೨೦, ೨೦೨೩ ರಿಂದ ಸೆ.೩೦ ೨೦೨೩ ರ ವರೆಗೆ ಅವಕಾಶವಿದ್ದು, ಆಸಕ್ತರು ಆಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ- https://kannadasin.kamataka.gov.in ದಲ್ಲಿ ಪಡೆಯಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button