ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ.ಗೋವಿಂದ ರಾವ್ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಪ್ರಾಧ್ಯಾಪಕರಾಗಿ, ಲೇಖಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟನಾಗಿ ಹೆಸರುವಾಸಿಯಾಗಿದ್ದ ಗೋವಿಂದ ರಾವ್, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಮುಂಜಾನೆ 4:45ರ ಸುಮಾರಿಗೆ ಗೋವಿಂದ ರಾವ್ ನಿಧನರಾಗಿದ್ದು, ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಿಗ್ಗೆ 8:30ರ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಮೊಮ್ಮಗಳು ಡಾ.ಅಪೂರ್ವ ಮಾಹಿತಿ ನೀಡಿದ್ದಾರೆ.
ವೃತ್ತಿಯಿಂದ ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದ ಗೋವಿಂದರಾವ್, ಮಾಲ್ಗುಡಿ ಡೇಸ್, ಮಾಹಾಪರ್ವ ಸೇರಿದಂತೆ ಹಲವು ಧಾರಾವಾಹಿ ಹಾಗೂ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು.
ಜಿ.ಕೆ.ಗೋವಿಂದ ರಾವ್ ನಿಧನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಚಾಮುಂಡಿ ಉತ್ಸವ ಮೂರ್ತಿ ಮೆರವಣಿಗೆ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ