Latest

ಹಿರಿಯ ನಟ ರಾಜೇಶ್ ವಿಧಿವಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹಿರಿಯ ಚಿತ್ರ ನಟ ರಾಜೇಶ್ ವಿಧಿವಶರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಟ ಅರ್ಜುನ್ ಸರ್ಜಾ ಅವರ ಮಾವ ರಾಜೇಶ್ ಕನ್ನಡದ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದರು.

ವಿದ್ಯಾರಣ್ಯಪುರದ ಅವರ ಮನೆಯಲ್ಲಿ ಇಂದು ಸಂಜೆಯವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

‘ವೀರ ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ರಾಜೇಶ್, ಪ್ರಸಿದ್ಧ ನಿರ್ಮಾಪಕ ಬಿ. ಎಸ್. ನಾರಾಯಣ್ ನಿರ್ಮಿಸಿ, ಸಿ.ವಿ. ಶಿವಶಂಕರ್ ಅವರು ನಿರ್ದೇಶಿಸಿದ ‘ನಮ್ಮ ಊರು’ ಚಿತ್ರ ಭರ್ಜರಿ ಯಶಸ್ಸು ಕಂಡಿದ್ದಲ್ಲದೆ ರಾಜೇಶ್ ಅವರಿಗೆ ಅಪಾರ ಜನಪ್ರಿಯತೆಯನ್ನು ತಂದಿತು. ಸುಮಾರು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕ ಪ್ರದಾನ ಪಾತ್ರಗಳು ಮತ್ತು ವೈವಿಧ್ಯಮಯ ಪೋಷಕ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.

‘ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ಬೆಳುವಲದ ಮಡಿಲಲ್ಲಿ’, ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ಮರೆಯದ ದೀಪಾವಳಿ’, ‘ಪ್ರತಿಧ್ವನಿ’, ‘ಕಾವೇರಿ’, ‘ದೇವರ ಗುಡಿ’, ‘ಬದುಕು ಬಂಗಾರವಾಯ್ತು’, ‘ಸೊಸೆ ತಂದ ಸೌಭಾಗ್ಯ’, ‘ಮುಗಿಯದ ಕಥೆ’, ‘ಬಿಡುಗಡೆ’, ‘ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ಮುಂತಾದ ಚಿತ್ರಗಳಲ್ಲಿ ರಾಜೇಶರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು.

ಕನ್ನಡದ ಹಿರಿಯ ನಟ ರಾಜೇಶ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button